ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ರಾಜೀನಾಮೆ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ. ಇತರ ಪಕ್ಷಗಳ ನಾಯಕರ ಮೇಲೆ ಯಾವುದೇ ಆರೋಪಗಳು ಬಂದ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ಮುಖಂಡರು ಒತ್ತಾಯಿಸುತ್ತಾರೆ. ಇದೀಗ ಸಚಿವೆ ಉಮಾಭಾರತಿ ಮೇಲೆ ಆರೋಪ ಬಂದಿರುವುದರಿಂದ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ