ಚಿತ್ರದುರ್ಗಾ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲೇ ಇದೀಗ ಕಾಂಗ್ರೆಸ್ ಸಚಿವರೊಬ್ಬರು ರಾಜೀನಾಮೆ ನೀಡುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಆಗಸ್ಟ್ 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಇದ್ದರೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಎಚ್ಚರಿಕೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಹಿರಿಯೂರು ವಕೀಲರ ಸಂಘ ನಿನ್ನೆ ನಡೆಸಿದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಅವರು