ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಬ್ಬರು ವಿದ್ಯಾರ್ಥಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಚಿವ ವಿನಯ್ ಕುಲಕರ್ಣಿ ಕಿಮ್ಸ್ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ ರೈತರ ಪರ ಸಂಘಟನೆಗಳು ಶಾಂತಿಯುತವಾಗಿ ಧರಣಿ ನಡೆಸಿದ್ದರು, ಆದರೆ, ನಿನ್ನೆಯ ಘಟನೆ ದುರಂತ ಎಂದು ತಿಳಿಸಿದರು.