ಬೆಂಗಳೂರು (ಆ.03): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ರಚನೆಗೆ ದೆಹಲಿಯಲ್ಲಿ ಕಸರತ್ತು ನಡೆಸುತ್ತಿದ್ದರೆ, ಸಚಿವ ಸ್ಥಾನ ಆಕಾಂಕ್ಷಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಲಾಬಿ ನಡೆಸುವ ಪ್ರಯತ್ನಗಳು ಸೋಮವಾರವೂ ಮುಂದುವರಿದಿವೆ. ಶಾಸಕರಾದ ಆರಗ ಜ್ಞಾನೇಂದ್ರ, ದೊಡ್ಡನಗೌಡ ಪಾಟೀಲ್, ಎಂ.ಪಿ.ಕುಮಾರಸ್ವಾಮಿ, ಎಂ.ಟಿ.ಬಿ.ನಾಗರಾಜ್, ನೆಹರು ಓಲೇಕಾರ್, ಎಸ್.ಆರ್.ವಿಶ್ವನಾಥ್ ಮತ್ತು ವಿಧಾನಪರಿಷತ್ ಸದಸ್ಯ ರವಿಕುಮಾರ್ ಪರವಾಗಿ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದರು.