ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಖಾತೆ ಬದಲಾಯಿಸುವಂತೆ 30ಕ್ಕೂ ಅಧಿಕ ಶಾಸಕರು ಮತ್ತು ಸಚಿವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಬಿಇಓಗಳ ವರ್ಗಾವಣೆ ವಿಚಾರದಲ್ಲಿ ತನ್ವೀರ್ ಸೇಠ್ ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರು ಖಾತೆ ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಾದ ರಮಾನಾಥ್ ರೈ, ಎಚ್. ಆಂಜನೇಯ, ಶಾಸಕರಾದ ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಸೇರಿದಂತೆ ಹಲವು ಶಾಸಕರು ಖಾತೆ