ಪಿಎಸ್ ಐ ಪರೀಕ್ಷಾ ಅಕ್ರಮದಲ್ಲಿ ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್ ಕೈವಾಡ ಇರುವುದು ಸ್ಪಷ್ಟವಾಗಿದೆ. ಅವರ ಸಂಬಂಧಿಕರಾದ ದರ್ಶನ್ ಗೌಡ ಮತ್ತು ನಾಗೇಶ್ ಗೌಡ ಪರೀಕ್ಷಾ ಅಕ್ರಮ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಯ ದರ್ಶನ್ ಗೌಡ ಮತ್ತು ಕುಣಿಗಲ್ ನ ನಾಗೇಶ್ ಗೌಡ ಇಬ್ಬರೂ ಅಕ್ರಮ ನಡೆಸಿದ್ದಾರೆ ಎಂದು ಪೊಲೀಸರು ನೋಟಿಸ್ ನೀಡಿದ್ದಾರೆ. ಆದರೆ