ರಾಜ್ಯದಲ್ಲಿ ಧಾರಕಾರವಾಗಿ ಸುರಿದ ಮಳೆಯಿಂದ ಕೆಲವು ಹಳ್ಳಿಗಳು ಜಲಾವೃತಗೊಂಡಿವೆ. ಹಲವೆಡೆ ಸರಕಾರದಿಂದ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಮುಳುಗಡೆಯಾಗಿರುವ ಗ್ರಾಮಗಳನ್ನು ಕಂದಾಯ ಹಾಗೂ ಪ್ರವಾಸೋದ್ಯಮ ಸಚಿವರು ವೀಕ್ಷಣೆ ಮಾಡಿದರು.