ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ನಾಪತ್ತೆಯಾಗಿದ ಹಿನ್ನಲೆಯಲ್ಲಿ ಅವರನ್ನು ಪತ್ತೆ ಹಚ್ಚುವ ಕಾರ್ಯ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸುವ ಸಲುವಾಗಿ ರಾಜ್ಯ ಗೃಹ ಸಚಿವ ಎಂ.ಬಿ. ಪಾಟೀಲ್ ಶನಿವಾರ(ನಾಳೆ) ಉಡುಪಿಗೆ ಆಗಮಿಸಲಿದ್ದಾರೆ. ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಎಂಬ ಬೋಟ್ ಹಾಗೂ ಅದರಲ್ಲಿ ಕೆಲಸ ಮಾಡುತ್ತಿದ್ದ ಮೀನೂಗಾರರು ಕಾಣೆಯಾಗಿದ್ದು, ಇಂದಿಗೂ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಸಚಿವ