ರಾಯಚೂರು : ನಗರದಿಂದ ಕಾಣೆಯಾಗಿದ್ದ ನಾಲ್ವರು ಪಿಯುಸಿ ವಿದ್ಯಾರ್ಥಿನಿಯರು ಕೊನೆಗೂ ಪತ್ತೆಯಾಗಿದ್ದಾರೆ.ಹುಬ್ಬಳ್ಳಿಯಲ್ಲಿ ಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರು ಈಗಾಗಲೇ ರಾಯಚೂರಿಗೆ ಬಂದಿದ್ದಾರೆ, ಇನ್ನಿಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಕರೆತರುತ್ತಿದ್ದಾರೆ.ಇದರಿಂದ ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎನ್ನುವ ಹಾಗೇ ಹೇಳದೇ ಕೇಳದೆ ಮನೆ ಬಿಟ್ಟು ಹೋಗಿದ್ದ ರಾಯಚೂರಿನ ನಾಲ್ವರು ಅಪ್ರಾಪ್ತೆಯರು ಕೊನೆಗೂ ಪತ್ತೆಯಾಗಿದ್ದಾರೆ.ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ