ಬೆಂಗಳೂರು: ರಾಜ್ಯಾದ್ಯಂತ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ವಿಧಾನಸೌಧ, ವಿಕಾಸಸೌಧದಲ್ಲಿ ನೌಕರರಿಲ್ಲದೇ ಬಣಗುಡುತ್ತಿದ್ದು, ಸರ್ಕಾರಿ, ಖಾಸಗಿ ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.