ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಬಂದ್ ಗೆ ಕಲಬುರ್ಗಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ಕಲಬುರಗಿಯಲ್ಲಿ ರೈತ ಸಂಘಟನೆ ಮತ್ತು ಎಡ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಶಾಲಾ-ಕಾಲೇಜುಗಳಿಗೆ