ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷ ತೊರೆಯುವ ನಾಯಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶುಕ್ರವಾರ ಹಾಸನ ಜಿಲ್ಲೆಯ JDS ನಾಯಕ, ಅರಕಲಗೂಡು ಕ್ಷೇತ್ರದ ಶಾಸಕ A.T. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.