ಬೆಂಗಳೂರು : ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ವಿಜಯನಗರ ಶಾಸಕರಾದ ಆನಂದ್ ಸಿಂಗ್ ಅವರ ಜೊತೆ