ಟಿಪ್ಪು ಜಯಂತಿ ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ಹೋರಾಟ ನಡೆಸುತ್ತಿದ್ದರೆ ಬಿಜೆಪಿ ಶಾಸಕ ಆನಂದ್ ಸಿಂಗ್ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿರುವುದು ಪಕ್ಷದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷದ ಶಿಸ್ತು ಸಮಿತಿ ಶಾಸಕ ಆನಂದ್ ಸಿಂಗ್ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಒಂದು ವಾರದೊಳಗೆ ಉತ್ತರಿಸುವಂತೆ ಆದೇಶ ನೀಡಿದೆ. ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುವುದೇ ಪಕ್ಷ ವಿರೋಧಿ ಧೋರಣೆಯಾಗಿದೆ. ಅದಲ್ಲದೇ ಟಿಪ್ಪು ಜಯಂತಿಯನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.