ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಕಳೆದ ರಾತ್ರಿ ಆಸ್ಪತ್ರೆಯಿಂದ ತರಾತುರಿಯಲ್ಲಿ ಡಿಸ್ಚಾರ್ಜ್ ಆಗಿದ್ದಾರೆಂದು ಹೇಳಲಾಗುತ್ತಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದ ವೇಳೆ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಶಾಸಕ ಆನಂದ್ ಸಿಂಗ್ ಚಿಕಿತ್ಸೆಗೆ ದಾಖಲಾಗಿದ್ದರು. ಆನಂದ್ ಸಿಂಗ್ ಅವರಿಗೆ ಇನ್ನೂ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು,