ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೇಸುಗೂರು ಅವರ ಕಾರು ಡಿಕ್ಕಿಯಾಗಿ ಮರಿಯಮ್ಮ ನಾಯಕ ಎಂಬ ವೃದ್ಧೆ ಸಾವನಪ್ಪಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಬಳಿ ನಡೆದಿದೆ. ನಿನ್ನೆ ಮೈಲಾಪುರ ಕ್ರಾಸ್ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಲಾಪುರ ಬಸ್ ನಿಲ್ದಾಣ ಬಳಿ ರಸ್ತೆ ದಾಟುತ್ತಿದ್ದ ವೃದ್ಧೆಗೆ ಶಾಸಕ ಬಸವರಾಜ ದಡೇಸುಗೂರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು