ಶಾಸಕರೊಬ್ಬರ ವಿರುದ್ಧ ಮಾತನಾಡಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಮಾತನಾಡಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ.ಗೊಬ್ಬರಗಾಲ ಗ್ರಾಮದ ನಾಗೇಂದ್ರ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ರಾತ್ರಿ ಬಾರ್ ವೊಂದರಲ್ಲಿ ಮದ್ಯಪಾನ ಮಾಡುವ ವೇಳೆ ನಾಗೇಂದ್ರ