ಬಳ್ಳಾರಿಯಲ್ಲಿ BJP ಶಾಸಕನ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾಸಕ M.S. ಸೋಮಲಿಂಗಪ್ಪ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.. ಶಾಸಕರು ಕಾರ್ಯಕರ್ತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರು ಹಿಟ್ಲರ್ ಆಡಳಿತ ಮಾದರಿಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ಅವರು ಕೇವಲ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ.. ಅವರು ಒಂದು ಕ್ಷೇತ್ರದ ಶಾಸಕರಾ ಅಥವಾ ಒಂದು ಕುಲಕ್ಕೆ ಶಾಸಕರಾ ಎಂದು ಕ್ಷೇತ್ರದ ಜನರು ಆಕ್ರೋಶ ಹೊರಹಾಕಿದ್ದಾರೆ.