ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ವಿಳಂಬವಾಗುತ್ತಿದೆ. ಆದರೆ ವಿಷಯದಲ್ಲಿ ಕಾಂಗ್ರೆಸ್ ಸ್ಪೀಕರ್ ಮೇಲೆ ಪ್ರಭಾವ ಬೀರೋ ಪ್ರಶ್ನೆಯೇ ಇಲ್ವಂತೆ.ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೀಗಂತ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರಕ್ಕೂ ಕಾಂಗ್ರೆಸ್ ಗೂ ಸಂಬಂಧವೇ ಇಲ್ಲ. ಸ್ಪೀಕರ್ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವತಃ ಉಮೇಶ್ ಜಾಧವ್ ಅವರೇ ಸ್ಪೀಕರ್ ನ್ಯಾಯಾಧೀಶರಂತಿದ್ದಾರೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ. ಹೀಗಿರಬೇಕಾದರೆ ಜಾಧವ್ ರಾಜೀನಾಮೆ ವಿಳಂಬದ