ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ಷೋಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಆದರೆ, ಈ ಕುರಿತು ಯಾವೊಬ್ಬ ಶಾಸಕನು ಚಕಾರ ಎತ್ತಿಲ್ಲ. ಈ ಶಾಸಕರಿಗೆ ಮಾನಮರ್ಯಾದೆ ಇಲ್ಲ. ಇದು ರಾಜ್ಯಕ್ಕೆ ಮಾಡಿರುವ ಅಪಮಾನ ಎಂದು