ಕಾಂಗ್ರೆಸ್ ಪಕ್ಷದಿಂದ ಶಾಸಕ ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಕಳೆದ 2015ರ ಏಪ್ರಿಲ್ 23 ರಂದೇ ಶಾಸಕ ಎಸ್.ಪಾಟೀಲ್ ನಡಹಳ್ಳಿಯನ್ನು ಅಮಾನತುಗೊಳಿಸಲಾಗಿತ್ತು. ದೇವರಹಿಪ್ಪರಗಿ ಕ್ಷೇತ್ರದ ಶಾಸಕ ನಡಹಳ್ಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮೊದಲು ನೋಟಿಸ್ ನೀಡಲಾಗಿತ್ತು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. ಆದರೆ, ಶಾಸಕ ನಡಹಳ್ಳಿ ನೋಟಿಸ್ಗೆ