ಮೈತ್ರಿ ಸರಕಾರಕ್ಕೆ ಶಾಕ್ ಬಿದ್ದಂತಾಗಿದೆ. ಶಾಸಕರಿಗೆ ವಿಪ್ ಜಾರಿ ಮಾಡಿದ್ದರೂ ಅದನ್ನು ಲೆಕ್ಕಿಸದೇ 9 ಶಾಸಕರು ಸದನಕ್ಕೆ ಗೈರಾಗಿದ್ದಾರೆ. ಇದರಿಂದಾಗಿ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದೆಯಾ? ಎನ್ನುವ ಚರ್ಚೆ ಶುರುವಾಗಿದೆ. ಸದನಕ್ಕೆ ಗೈರು ಹಾಜರಾಗಿರುವ ಶಾಸಕರು ಕಾಂಗ್ರೆಸ್ ಮುಖಂಡರಿಗೆ ಸೆಡ್ಡು ಹೊಡೆದಿದ್ದಾರೆ. ಇದರಿಂದಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ಬಿಸಿತುಪ್ಪದಂತಾಗಿದೆ. ಕಾಂಗ್ರೆಸ್ ಅತೃಪ್ತ ಶಾಸಕರ ಗೈರು ಹಾಜರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಳ್ಳುವ