ಬೆಂಗಳೂರು : ಟಿಕೆಟ್ ಸಿಗದ ನಿಷ್ಠಾವಂತರಿಗೆ ವಿಧಾನ ಪರಿಷತ್ ಸ್ಥಾನ, ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಕೊಡುತ್ತೇವೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಟಿಕೆಟ್ಗಾಗಿ ಸಿದ್ದರಾಮಯ್ಯ ಮುಂದೆ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲಾ ಕಡೆ ಆಕಾಂಕ್ಷಿಗಳು ಇದ್ದಾರೆ. 1,200 ಜನ ಟಿಕೆಟ್ಗೆ ಅರ್ಜಿ ಹಾಕಿದ್ದಾರೆ. ಟಿಕೆಟ್ ಕೇಳೋದ್ರಲ್ಲಿ ತಪ್ಪೇನೂ ಇಲ್ಲ. ಯಾರಿಗೆ ಟಿಕೆಟ್ ಕೊಡಬೇಕು ಅಂತ ಪಾರ್ಟಿ ತೀರ್ಮಾನ ಮಾಡುತ್ತೆ