ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯರ ಅವಧಿಯು ಕೊನೆಗೊಳ್ಳುತ್ತಿರುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ಶುರುವಾಗಿದೆ. 2020 ರ ಜೂನ್ ಗೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಮುಂದೆ ಚುನಾವಣೆ ಕೈಗೊಳ್ಳಬೇಕಿರುವುದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಪೂರ್ವ ಸಿದ್ಧತಾ ಸಭೆಯು ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಶರತ್ ಅಧ್ಯಕ್ಷತೆಯಲ್ಲಿ ನಡೆಯಿತು.ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು