ಜೂನ್ ೩ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ನಮ್ಮದೂ ತಡವಾಗಿದೆ. ಬಿಜೆಪಿ ಪಟ್ಟಿ ನೋಡಿಕೊಂಡು ನಾವು ನಿರ್ಧಾರ ಮಾಡುತ್ತೇವೆ ಎಂದರು. ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಹೈಕಮಾಂಡ್ ಗೆ ನೀಡಲಾಗಿದೆ. ಯಾರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲವೋ ಅಂತಹ ಸಮುದಾಯದ ನಾಯಕರನ್ನು