ಬೆಂಗಳೂರು: ಕಾಲೇಜಿಗೆ ಹೋಗುವಾಗ ಇನ್ಮುಂದೆ ಮೊಬೈಲ್ ಜತೆಗೆ ಲ್ಯಾಪ್ ಟಾಪ್ ಕೂಡಾ ಕೊಂಡೊಯ್ಯುವಂತಿಲ್ಲ! ಹೀಗೆ ರಾಜ್ಯ ಸರ್ಕಾರವೇ ಆದೇಶ ಹೊರಡಿಸಿದೆ.ಪದವಿಪೂರ್ವ ಕಾಲೇಜುಗಳಿಗೆ ಈ ನಿಯಮ ಅನ್ವಯಿಸಲಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇಂತಹ ತಂತ್ರಜ್ಞಾನಗಳ ದುರ್ಬಳಕೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.ಇದಕ್ಕೂ ಮೊದಲು ರಾಜ್ಯ ಸರ್ಕಾರ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಬೈಕ್, ಕಾರು ತರುವುದನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಿತ್ತು. ಇದರ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ.ತಾಜಾ