ಪಾರ್ಕ್ ಬಂದವರನ್ನೇ ಗುರಿಯಾಗಿಸಿ ಮೊಬೈಲ್ ಗಳನ್ನ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಇದೇ ಪ್ರಯತ್ನದಲ್ಲಿ ತಪ್ಪಿಸಿಕೊಳ್ಳುವ ಭರದಲ್ಲಿ ಬಾವಿಗೆ ಬಿದ್ದು ಮಸಣ ಸೇರಿದ ಘಟನೆ ಕಲಬುರಗಿಯಲ್ಲಿ ಸಂಭವಿಸಿದೆ. ಮೃತ ಮೊಬೈಲ್ ಕಳ್ಳ ನಗರದ ಹಮಾಲವಾಡಿ ನಿವಾಸಿ ಎನ್ನಲಾಗುತ್ತಿದ್ದು, ಮೃತ ಕಳ್ಳನ ಬಗ್ಗೆ ಇನ್ನು ಖಚಿತ ಮಾಹಿತಿ ಲಭ್ಯವಾಗಿಲ್ಲ. ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದೆಡೆ ಹಾಳು ಬಿದ್ದ ಬಾವಿಯಲ್ಲಿ ರಕ್ಷಣಾ ಸಿಬ್ಬಂದಿಯಿಂದ ಶೋಧ ಕಾರ್ಯ, ಇನ್ನೊಂದೆಡೆ