ಪ್ರಧಾನಿ ಮೋದಿ ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ತಮ್ಮ ವೈಫಲ್ಯಗಳಿಗೆ ಬೇರೆಯವರನ್ನು ದೂರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಜಾವಿಟ್ಸ್ ಸೆಂಟರ್ನಲ್ಲಿ ಭಾರತೀಯ ಮೂಲದ ಸದಸ್ಯರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತದೇ ಒಂದು ರೈಲು ಅಪಘಾತವಾಗಿತ್ತು. ಆಗ