ಬೆಂಗಳೂರಿನ KSR ರೈಲು ನಿಲ್ದಾಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಪ್ರಧಾನಿಯನ್ನು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು.