ಕಪ್ಪು ಹಣ ಹೊರ ತರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಎರಡು ಬಾರಿ ಮೂರ್ಖರನ್ನಾಗಿ ಮಾಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆಯ ಪ್ರಚಾರದ ಸಮಯದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ವಾಪಸ್ ತಂದು ಜನತೆಗೆ ಹಂಚುತ್ತೇನೆ ಎಂದು ಹೇಳಿ ಮೂರ್ಖರನ್ನಾಗಿಸಿದ್ದರು. ಇದೀಗ, ಗರಿಷ್ಟ ಮುಖಬೆಲೆಯ ನೋಟ್