ಪ್ರಧಾನಿ ನರೇಂದ್ರ ಮೋದಿ ವಾಮ ಮಾರ್ಗದ ಮೂಲಕ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ನಲ್ಲಿ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಿ, ಬಿಜೆಪಿಗೆ ಸೇರ್ಪಡೆಗೊಳಿಸಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಿದ್ದಾರೆ. ಇದಕ್ಕೆ ನನ್ನ ತೀವ್ರ ವಿರೋಧವಿದೆ ಎಂದು ಗುಡುಗಿದ್ದಾರೆ. ತಮಿಳುನಾಡು ಹೊರತುಪಡಿಸಿ ದೇಶಾದ್ಯಂತ ಎಲ್ಲಾ ರಾಜ್ಯಗಳನ್ನು ಕೇಸರಿಕರಣಗೊಳಿಸಲು ಮೋದಿ ಮತ್ತು ಅಮಿತ್ ಶಾ ಸಂಚು