ನವದೆಹಲಿ(ಆ.11): ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸಂಸದರು ಮಂಡಿಸಿದ್ದ ನಿರ್ಣಯಗಳ ಮೇಲೆ ಮತದಾನ ನಡೆಯುವ ವೇಳೆ ಹಾಜರಿರದ ಸಂಸದರ ವಿವರಗಳನ್ನು ನೀಡುವಂತೆ ಪ್ರಧಾನಿ ಮೋದಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮಂಗಳವಾರ ಸೂಚಿಸಿದ್ದಾರೆ. ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಈ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ. ‘ನ್ಯಾಯಾಧಿಕರಣ ಸುಧಾರಣಾ ಮಸೂದೆ’ಯನ್ನು ಸದನದ ಆಯ್ಕೆ ಸಮಿತಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಕೆಲ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ನಿರ್ಣಯ