ರಾಜ್ಯ ಸರ್ಕಾರ ಶೇ 10ಕ್ಕಿಂತ ಅಧಿಕ ಕಮಿಷನ್ನ ಸರ್ಕಾರ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಧಾನಿ ಹುದ್ದೆಯಲ್ಲಿದ್ದುಕೊಂಡು ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಆಧಾರ ರಹಿತ ಆರೋಪ ಮಾಡುವುದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದಾರೆ. ಅವರು ಬಿಜೆಪಿಯ ಪ್ರಧಾನಿಯಲ್ಲ. ದೇಶದ ಪ್ರಧಾನಿ ಎಂಬುದು