ಮಹಾದಾಯಿ ಸಮಸ್ಯೆಯ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಸ್ತಾಪ ಮಾಡದೇ ಉತ್ತರ ಕರ್ನಾಟಕದ ಜನರಿಗೆ ನಿರಾಸೆ ಮೂಡಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ದೀರ್ಘವಾಗಿ ಭಾಷಣ ಮಾಡಿದರು. ಆದರೆ, ಮಹಾದಾಯಿ ವಿಚಾರವನ್ನು ಪ್ರಸ್ತಾಪ ಮಾಡಲೇ ಇಲ್ಲ. ಮಹಾದಾಯಿ ನೀರಿಗಾಗಿ ಹೋರಾಟಗಾರರು ಹಂತ ಹಂತವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದೂ ಕೂಡ ಮಹಾದಾಯಿ ನೀರಿಗಾಗಿ ಪ್ರತಿಭಟನೆ ನಡೆದಿತ್ತು. ನರೇಂದ್ರ