ಫೆ. 24ರಂದು ಈ ಅವಧಿಯ ಪ್ರಧಾನಿ ನರೇಂದ್ರ ಮೋದಿಯ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗಲಿದೆ.ಈ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಮೋಹನ್ ಹೇಳಿಕೆ ನೀಡಿದ್ದು, ನಾಳೆ ಬೆಂಗಳೂರು ಮಹಾನಗರ ಘಟಕದಿಂದ ಮೋದಿ ಮನ್ ಕಿ ಬಾತ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾವಿರಾರು ಸಾರ್ವಜನಿಕರು ಹಾಗೂ ಕಾರ್ಯಕರ್ತರು ಬರಲಿದ್ದಾರೆ ಎಂದರು.ಈ ಅವಧಿಯ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ