ಎರಡು ದಿನ ರಾಜ್ಯ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಬರಲಿದ್ದಾರೆ. ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.. ಸ್ವಾತಂತ್ರ್ಯ ಹೋರಾಟಗಾರರ ನಾಡು ಕರ್ನಾಟಕದ ಬಾರ್ಡೋಲಿ ಅಂಕೋಲಾವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.. ಶಾಸಕಿ ರೂಪಾಲಿ ನಾಯ್ಕ್ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.