ಬೆಂಗಳೂರು(ಜು.24): ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ನಿಶ್ಚಿತವಾದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಗದ್ದುಗೆ ಯಾವ ಸಮುದಾಯಕ್ಕೆ ಸಿಗಬಹುದು ಎಂಬ ಕುತೂಹಲ ಕೇವಲ ಆಡಳಿತಾರೂಢ ಬಿಜೆಪಿಯಷ್ಟೇ ಅಲ್ಲ ಇತರ ರಾಜಕೀಯ ಪಕ್ಷಗಳಲ್ಲೂ ತೀವ್ರವಾಗಿದೆ.ಲಿಂಗಾಯತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರ ನಿರ್ಗಮನದ ಹಿನ್ನೆಲೆಯಲ್ಲಿ ಅದೇ ಸಮುದಾಯಕ್ಕೆ ಸೇರಿದವರಿಗೆ ನೀಡಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿರುವ ಸಾಮಾನ್ಯ ನಿರೀಕ್ಷೆ. ಆದರೆ, ರಾಜಕೀಯ ಪ್ರಯೋಗ ಮಾಡುವುದರಲ್ಲಿ ನಿಷ್ಣಾತರಾಗಿರುವ ನರೇಂದ್ರ ಮೋದಿ-ಅಮಿತ್ ಶಾ ಜೋಡಿ