ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್ನ ಮಾಜಿ