ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ದೀಪೋತ್ಸವ ನಡೆಸಲಾಗ್ತಿದ್ದು, ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಹಬ್ಬವನ್ನು ಆಚರಿಸಲಿದ್ದಾರೆ. ಅಯೋಧ್ಯೆಯ ದೀಪೋತ್ಸವ ಬಹಳ ವಿಶೇಷವಾದುದು. ಶ್ರೀರಾಮ ತನ್ನ 14 ವರ್ಷದ ವನವಾಸ ಮುಗಿಸಿ ವಾಪಾಸ್ ಬಂದ ನಂತರ ಜನರು ಇಡೀ ಅಯೋಧ್ಯೆಯನ್ನು ದೀಪಗಳಿಂದ ಅಲಂಕರಿಸಿ, ಸಂಭ್ರಮಿಸಿದ್ದರು ಎಂಬ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯ ದೀಪಾವಳಿ ಬಹಳ ಪ್ರಸಿದ್ಧಿ ಪಡೆದಿದೆ. ಅಯೋಧ್ಯೆಯ ಆಲಯದ ಘಾಟ್ನಲ್ಲಿ ಇಂದು 15 ಲಕ್ಷ ಹಣತೆಗಳು ಬೆಳಗಲಿವೆ. ಈ ಬಾರಿ