ಮೈಸೂರು : ಅಂತರಾಷ್ಟ್ರೀಯ ಯೋಗ ದಿನಕ್ಕೆ ಮೈಸೂರಿಗೆ ಆಗಮಿಸುವ ಮೋದಿ ಅವರ ಕಾರ್ಯಕ್ರಮ ಪಟ್ಟಿ ಅಂತಿಮವಾಗಿದೆ.ಜೂನ್ 20 ಮತ್ತು 21 ಎರಡು ದಿನ ಪ್ರಧಾನಿ ಮೋದಿ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹೌದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಸಂಜೆ 4.55 ಕ್ಕೆ ಮೈಸೂರು ತಲುಪಲಿದ್ದಾರೆ.ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಯೋಜನೆಗಳ