ಶೀಘ್ರದಲ್ಲೇ ಮೋದಿ ಬೆಂಗಳೂರಿಗೆ

ಬೆಂಗಳೂರು| geetha| Last Updated: ಬುಧವಾರ, 24 ನವೆಂಬರ್ 2021 (15:52 IST)
ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
 
ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಲಾ ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ಡಿಸೆಂಬರ್​ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್ ಹಾಗೂ ವಿ.ಸೋಮಣ್ಣ ಅವ್ರು, ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾರ್ಯಕ್ರಮದ ಪೂರ್ವಬಾವಿ ತಯಾರಿ ವೀಕ್ಷಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :