ಚಿಕ್ಕಬಳ್ಳಾಪುರ : ಮಾ.17ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ 1.5 ಕೋಟಿ ಕಾರ್ಡುಗಳ ವಿತರಣೆ ಮಾಡುವ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ವೈದ್ಯಕೀಯ ಕಾಲೇಜು ಉದ್ಘಾಟನೆ ಮತ್ತು 22 ಸಾವಿರ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ. ಸುಧಾಕರ್ ಹೇಳಿದರು.ಮಂಚೇನಹಳ್ಳಿ ತಾಲೂಕಿನ ಹಳೇಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ನೂತನ ತಾಲೂಕು ಮಂಚೇನಹಳ್ಳಿ