ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರವಾಗಿ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ವಿದ್ವತ್ ಪರ ವಕೀಲರು ಮಧ್ಯಂತರ ಜಾಮೀನು ನೀಡುವುದಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ, ವಿದ್ವತ್ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ್ದಾರೆ. ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಫೆಬ್ರವರಿ 26 ರವರೆಗೆ ಅವಕಾಶ ನೀಡಲಾಗಿದೆ.