ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜೈಲಾ? ಬಿಡುಗಡೆಯ ಭಾಗ್ಯ ಸಿಗುತ್ತದಾ ಎಂದು ಇಂದು ಕಾದು ನೋಡಬೇಕಿದೆ. ಇಂದು ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಕೋರ್ಟ್ ನಲಪಾಡ್ ಮತ್ತು ಸ್ನೇಹಿತರಿಗೆ ಬಿಡುಗಡೆಯ ಭಾಗ್ಯ ನೀಡುತ್ತಾ ಎಂಬ ಕುತೂಹಲ ಮೂಡಿದೆ.ಮೂಲಗಳ ಪ್ರಕಾರ ಕೋರ್ಟ್ ಇಂದು ಜಾಮೀನು ನೀಡುವ ಸಾಧ್ಯತೆ ಕಡಿಮೆಯಿದ್ದು, ಮುಂದಿನ ವಾರಕ್ಕೆ ಮುಂದೂಡುವ ಸಾಧ್ಯತೆ ಇದೆ