ಬೆಂಗಳೂರು: ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸಂಗಡಿಗರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದು, ಅದಕ್ಕಿಂತ ಮೊದಲು ಆರೋಗ್ಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಿಗಿ ಭದ್ರತೆ ನಡುವೆ ಆಸ್ಪತ್ರೆಗೆ ಕರೆ ತಂದ ಪೊಲೀಸರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇದೀಗ ನಲಪಾಡ್ ಮತ್ತು ಸಂಗಡಿಗರು ಕೋರ್ಟ್ ಗೆ ಹಾಜರಾಗುತ್ತಿದ್ದು, ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ.ಆದರೆ ಕೊಲೆ ಯತ್ನ ಪ್ರಕರಣ ದಾಖಲಾಗಿರುವುದರಿಂದ ಜಾಮೀನು ಸಿಗುವ