ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಜಾಮೀನು ನೀಡಿದ ಹೈಕೋರ್ಟ್ ಕೆಲವು ಷರತ್ತು ವಿಧಿಸಿದೆ.ಫರ್ಜಿ ಕೆಫೆಯಲ್ಲಿ ಮೂರು ತಿಂಗಳ ಹಿಂದೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಕಳೆದಿದ್ದರು. ಇದೀಗ ಜಾಮೀನು ಮಂಜೂರಾದರೂ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು, ಅದನ್ನು ಪಾಲಿಸಲೇಬೇಕಿದೆ.ಆರೋಪಿ ಪ್ರಭಾವಿ ವ್ಯಕ್ತಿಯಾದ್ದರಿಂದ ಸಾಕ್ಷ್ಯ ನಾಶ ಮಾಡಬಹುದೆಂಬ ಕಾರಣಕ್ಕೆ ಇದುವರೆಗೆ ಜಾಮೀನು