ರಾಷ್ಟ್ರೀಕೃತ ಬ್ಯಾಂಕ್ ಖಾತೆದಾರರಿಗೆ ಹಾಗೂ ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಇನ್ಮುಂದೆ ಮನೆ ಬಾಗಿಲಿಗೆ ಹಣ ಬರುತ್ತದೆ. ಲಾಕ್ ಡೌನ್ ಇದ್ದರೂ ಚಿಂತೆಯಿಲ್ಲ. ಹಾವೇರಿ ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ವಿಶೇಷವಾಗಿ ಸಾಮಾಜಿಕ ಭದ್ರತಾ ಪಿಂಚಣಿ ಮತ್ತು ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಅವಶ್ಯಕ ಸೇವೆಗಳನ್ನು ಒದಗಿಸಲು ಅಂಚೆ ಇಲಾಖೆ ಸನ್ನದ್ಧವಾಗಿದ್ದು, ಗ್ರಾಮೀಣ ಜನತೆ ಹತ್ತಿರದ ಅಂಚೆ ಇಲಾಖೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ