ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಂಚಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದು, ವಿಡಿಯೋ ಸಿಡಿ ಬಿಡುಗಡೆ ಮಾಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.