ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 2 ದಿನ ಭಾರೀ ಮಳೆಯಾಗಲಿದೆ. ಜೂ. 13 ರಿಂದ 15 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ