ಕಾಂಗ್ರೆಸ್ ಪಕ್ಷ ಸೇರಿದಂತೆ ಇತರ ಪಕ್ಷಗಳ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ, ಸದ್ಯಕ್ಕೆ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಬೇಸತ್ತ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಮುಖ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಮೋದಿ ಪರ ಅಲೆಯಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಖಚಿತ ಎಂದು ಗುಡುಗಿದ್ದಾರೆ. ಚುನಾವಣೆಗೆ ಇನ್ನೂ ಒಂದು ವರ್ಷದ ಕಾಲವಧಿಯಿರುವುದರಿಂದ